ಕರೋನಾ ಸೋಂಕು ವ್ಯಾಪಕಗೊಳ್ಳುವುದನ್ನು ತಡೆಗಟ್ಟುವ ದಿಸೆಯಲ್ಲಿ ದೇಶಾದ್ಯಂತ ನಿರ್ಬಂಧ ಹೇರಲಾಗಿದೆ. ಈ ಸಂದರ್ಭದಲ್ಲಿ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದು, ಸಾಂಕ್ರಾಮಿಕ ರೋಗವನ್ನು ತಡೆಗಟ್ಟುವ ಸಲುವಾಗಿ ಹೊಟೇಲ್, ರೆಸ್ಟೋರೆಂಟ್, ಪಬ್, ಕ್ಲಬ್ ಚಟುವಟಿಕೆಗಳಿಗೆ ತಡೆ ಹಾಕಲಾಗಿದೆ. ಬಾರ್ ಅಂಡ್ ರೆಸ್ಟೋರೆಂಟ್‌ಗಳನ್ನು ಮುಚ್ಚುವಂತೆ ಆದೇಶ ಹೊರಡಿಸಲಾಗಿದೆ. ರೈಲು, ಬಸ್ ಸಂಚಾರ ವ್ಯವಸ್ಥೆಯ ಮೇಲೂ ನಿರ್ಬಂಧ ಹೇರಲಾಗಿದ್ದು ಯಾವುದೇ ಕಾರಣಕ್ಕೂ ಸಾರಿಗೆ ವ್ಯವಸ್ಥೆಗೆ ಅವಕಾಶ ನೀಡದಂತೆ ಅಪ್ಪಣೆ ಮಾಡಲಾಗಿದೆ. ಎಲ್ಲ ರೀತಿಯ ಸಾರ್ವಜನಿಕ, ಶೈಕ್ಷಣಿಕ, ಆರ್ಥಿಕ ಚಟುವಟಿಕೆಗಳಿಗೆ ನಿರ್ಬಂಧ ಹೇರಲಾಗಿದೆ.

ಕೋರೋನಾ ವೈರಸ್ ನಿಯಂತ್ರಣಕ್ಕೆ ಕೈಗೊಂಡಿರುವ ಕಾರ್ಯಾಚರಣೆಗೆ ಟಾಟಾ ಟ್ರಸ್ಟ್ ವತಿಯಿಂದ 500 ಕೋಟಿ ರೂಪಾಯಿ ದೇಣಿಗೆ ನೀಡಲಾಗಿದೆ. ಕೋರೋನಾ ವೈರಸ್ ವಿರುದ್ಧದ ಸಮರಕ್ಕೆ 500 ಕೋಟಿ ರೂಪಾಯಿ ದೇಣಿಗೆ ನೀಡಲಾಗಿದೆ. ಸಂಕಷ್ಟದ ಸಮಯದಲ್ಲಿ ಅಗತ್ಯತೆಗಳನ್ನು ನಿರ್ವಹಿಸಲು ಸಂಪನ್ಮೂಲ ಕ್ರೋಢೀಕರಿಸಬೇಕಿದೆ. ಇದು ಕಠಿಣ ಸವಾಲಿನ ಸಂದರ್ಭವಾಗಿದೆ. ಕೊರೋನಾ ಸೋಂಕಿನ ವಿರುದ್ಧ ಹೋರಾಡಲು ತಮ್ಮ ಪ್ರಾಣ ಮತ್ತು ಸುರಕ್ಷತೆಯನ್ನು ಪಣಕ್ಕಿಟ್ಟಿರುವ ಪ್ರತಿ ವ್ಯಕ್ತಿಗೂ ನಾವು ಗೌರವ ಸಲ್ಲಿಸುತ್ತೇವೆ ಎಂದು ಟಾಟಾ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

Leave a Reply