ವಿಶ್ವ ಬಾಡಿಬಿಲ್ಡಿಂಗ್ ಚಾಂಪಿಯನ್ಶಿಪ್ನಲ್ಲಿ ಚಿನ್ನ ಗೆದ್ದ ಭಾರತೀಯ ಸೇನೆಯ ಹವಿಲ್ದಾರ್ ಆಗಿರುವ ಅನುಜ್ ಕುಮಾರ್ ರವರನ್ನು ಅದ್ದೂರಿಯಾಗಿ ಸ್ವಾಗತಿಸಲಾಗಿದೆ.  100 ಕೆಜಿ ಪ್ಲಸ್ ವಿಭಾಗದಲ್ಲಿ ಚಿನ್ನದ ಪದಕ ಗೆದ್ದ ಅನುಜ್ ಕುಮಾರರನ್ನು ಹಿರಿಯ ಅಧಿಕಾರಿಗಳು ಸ್ವಾಗತಿಸಿದರು. ಮಾತ್ರವಲ್ಲ ಭಾರತ ಸೇನೆಯ ಬಾಡಿಬಿಲ್ಡರ್ ಗಳ ತಂಡವೂ ಒಟ್ಟು ಉತ್ತಮ ಪ್ರದರ್ಶನ ನೀಡಿದ್ದು, ಭಾರತ ಪ್ರತಿನಿಧಿಸಿದ ತಂಡವು ಎರಡನೇ ಸ್ಥಾನ ಪಡೆದುಕೊಂಡಿದೆ.

ಮಾತ್ರವಲ್ಲ, ಭಾರತೀಯ ಸೇನೆಯ ಚಿತ್ರರೇಶ್ ನಟೇಶನ್.ಎಂಬುವರು ಮಿಸ್ಟರ್ ಯೂನಿವರ್ಸ್ 2019 ಗೆದ್ದುಕೊಂಡ ಸಾಧನೆ ಮಾಡಿದ್ದಾರೆ. ಭಾರತೀಯ ಸೇನೆಯ ವೀರರು ಕೇವಲ ಗಡಿಯಲ್ಲಿ ನಿಂತು ದೇಶವನ್ನು ಕಾಯುವ ರಕ್ಷಿಸುವ ಕೆಲಸ ಮಾಡುತ್ತಿರುವುದಲ್ಲ, ಬದಲಾಗಿ ವಿಭಿನ್ನ ಕ್ಷೇತ್ರದಲ್ಲಿ ಭಾರತವನ್ನು ಪ್ರತಿನಿಧಿಸುವ ಮೂಲಕ ದೇಶಸೇವೆಯ ಜವಾಬ್ದಾರಿಯನ್ನೂ ನಿರ್ವಹಿಸುತ್ತಿದ್ದಾರೆ.

LEAVE A REPLY

Please enter your comment!
Please enter your name here