ಹುಬ್ಬಳ್ಳಿ: ಕರ್ನಾಟಕ ರಾಜ್ಯದಲ್ಲಿ ಅರಾಜಕತೆ ಮೂಡಲು ಕಾಂಗ್ರೆಸ್ ಸರ್ಕಾರದ ಆಡಳಿತವೇ ಕಾರಣ. ರಾಹುಲ್ ಗಾಂಧಿಯನ್ನು ಈ ದೇಶದ ರಾಜನನ್ನಾಗಿ ಮಾಡಲು ಹೊರಟಿದ್ದಾರೆ. ಕಾಂಗ್ರೆಸ್ ನವರು ಹನುಮಂತನನ್ನು ಪೂಜಿಸುವುದಿಲ್ಲ, ಟಿಪ್ಪುವನ್ನು ಪೂಜಿಸುತ್ತಾರೆ. ಹಾಗಾಗಿ ಟಿಪ್ಪುವನ್ನು ಆರಾಧಿಸುವವರು ಇಲ್ಲಿ ಅಧಿಕಾರಕ್ಕೆ ಬರಬಾರದು ಎಂದು ಉತ್ತರಪ್ರದೇಶ ಮುಖ್ಯ ಮಂತ್ರಿ ಯೋಗಿ ಆದಿತ್ಯನಾಥ್ ವಾಗ್ದಾಳಿ ನಡೆಸಿದರು.

ಹುಬ್ಬಳ್ಳಿಯ ನೆಹರೂ ಮೈದಾನದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ನೇತೃತ್ವದ ಪರಿವರ್ತನಾ ಯಾತ್ರೆಯ‌ ರ‌್ಯಾಲಿಯಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಕರ್ನಾಟಕ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದಿಂದಾಗಿ ಕಾನೂನು ವ್ಯವಸ್ಥೆ ಹದಗೆಟ್ಟಿದೆ. ರೈತರು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ. ಈ ವಿಷಯ‌ ಬಹಳ ನೋವನ್ನುಂಟು ಮಾಡಿದೆ. ಕರ್ನಾಟಕವನ್ನು ಕಾಂಗ್ರೆಸ್ ಮುಕ್ತ ಮಾಡಬೇಕಾಗಿದೆ ಎಂದು ಅವರು ಹೇಳಿದರು.

ಉತ್ತರ ಕರ್ನಾಟಕದ ಅಭಿವೃದ್ಧಿಗಾಗಿ ಕೇಂದ್ರ ಸರ್ಕಾರದಿಂದ 10 ಸಾವಿರ ಕೋಟಿ ರುಪಾಯಿ ಅನುದಾನವನ್ನು ನೀಡಿದೆ ಆದರೆ ಕಾಂಗ್ರೆಸ್ ಸರ್ಕಾರ ಅಭಿವೃದ್ಧಿಯ ಕಡೆ ಗಮನ ಹರಿಸುತ್ತಿಲ್ಲ ಎಂದು ಹೇಳಿದರು.

Leave a Reply