ಬೆಂಗಳೂರು: ಗುಜರಾತ್ ವಿಧಾನಸಭಾ ಚುನಾವಣಾ ಫಲಿತಾಂಶ ರಾಜ್ಯದ ಮೇಲೆ ಯಾವುದೇ ಪರಿಣಾಮ ಬೀರುದಿಲ್ಲ ಎಂದು ವಿಶ್ವಾಸ ವ್ಯಕ್ತಪಡಿಸಿದ್ದು, ಗುಜರಾತಿನಲ್ಲಿ ವಿರೋಧ ಪಕ್ಷದ ನಾಯಕರಾಗಿದ್ದ ಶಂಕರ್ ಸಿಂಗ್ ವಘೇಲ ಹಾಗೂ ಕಾಂಗ್ರೆಸ್‌ನ 18 ಶಾಸಕರು ಬಿಜೆಪಿಗೆ ಸೇರಿದ್ದರಿಂದ ಪಕ್ಷಕ್ಕೆ ಹಿನ್ನಡೆಯಾಗಿದೆ. ಆದರೆ ಪಕ್ಷ ಕಳೆದ ಬಾರಿಗಿಂತ ಹೆಚ್ಚು ಸ್ಥಾನ ಗಳಿಸಿದೆ. ಅದಕ್ಕೆ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರ ಪ್ರಭಾವವೂ ಇದೆ ಎಂದಿದ್ದಾರೆ.
ಗುಜರಾತಿಗೆ ಅಮಿತ್ ಶಾ ಮತ್ತು ‌ಪ್ರಧಾನಿ ಮೋದಿ 50ಕ್ಕೂ ಹೆಚ್ಚು ಬಾರಿ ಭೇಟಿ ನೀಡಿದ್ದರು. ದೇಶದ ಎಲ್ಲ‌ ಬಿಜೆಪಿ ಮುಖ್ಯಮಂತ್ರಿಗಳು ಭೇಟಿ ನೀಡಿ ಪ್ರಚಾರ ನಡೆಸಿದ್ದರು. ಆದರೆ ಕರ್ನಾಟಕದ ಜನ ಅಭಿವೃದ್ಧಿ ನೋಡಿ ಮತ ನೀಡುತ್ತಾರೆ ಎಂದು ಹೇಳಿದ್ದಾರೆ.

ಚುನಾವನೆ ಬಗ್ಗೆ ಪ್ರತಿಕ್ರಿಯಿಸಿದ ಕೆಪಿಸಿಸಿ ಅಧ್ಯಕ್ಷ ಡಾ.ಜಿ. ಪರಮೇಶ್ವರ್, ಗುಜರಾತ್ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಉತ್ತಮ ಸಾಧನೆ ತೋರಿದೆ. ಗುಜರಾತ್‌ನಲ್ಲಿ ಕಾಂಗ್ರೆಸ್ ಮಾಡಿರುವ ಉತ್ತಮ ಸಾಧನೆ ಮುಂಬರುವ ರಾಜ್ಯ ವಿಧಾನಸಭಾ ಚುನಾವಣೆಗೂ ಸಹಾಯಕವಾಗಲಿದೆ ಎಂದು ಸುದ್ದಿಗಾರರೊಂದಿಗೆ ಮಾತನಾಡುತ್ತಾ ಹೇಳಿದ್ದಾರೆ.
‘ಚುನಾವಣೆಯಲ್ಲಿ ಇವಿಯಂ ಮತಯಂತ್ರ ಬಳಸುವುದರಿಂದ ಫಲಿತಾಂಶದಲ್ಲಿ ಏರುಪೇರು ಮಾಡಬಹುದು ಎಂಬುದನ್ನು ಅಮೆರಿಕ ವಿಶ್ವವಿದ್ಯಾಲಯ ತಂತ್ರಜ್ಞರು ತೋರಿಸಿಕೊಟ್ಟಿದ್ದಾರೆ. ಹೀಗಾಗಿ ಈ ಹಿಂದೆ ಇದ್ದಂತೆ ಬ್ಯಾಲೆಟ್ ಪೇಪರ್ ಮೂಲಕ ಮತ ಚಲಾಯಿಸುವ ವ್ಯವಸ್ಥೆ ಜಾರಿಗೊಳಿಸಬೇಕು ಎಂಬುದು ನಮ್ಮ ಒತ್ತಾಯವಾಗಿದೆ. ಈ ಕುರಿತು ಚುನಾವಣಾ ಆಯೋಗಕ್ಕೂ ಮನವಿ ಮಾಡಲಾಗುವುದು’ ಎಂದು ಹೇಳಿದರು.

Leave a Reply