ಬಿಜಾಪುರ: ದಾನಮ್ಮ ಎಂಬ ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ ಮಾಡಿ ಬರ್ಬರವಾಗಿ ಹತ್ಯೆ ಮಾಡಿದ ಪ್ರಕರಣವನ್ನು ಸ್ಥಳೀಯ ಪೊಲೀಸರು ದಿಕ್ಕು ತಪ್ಪಿಸುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ದಲಿತ ದಮನಿತ ಸ್ವಾಭಿಮಾನಿ ವೇದಿಕೆಯ ಸಂಚಾಲಕ ಬಿ.ಆರ್. ಭಾಸ್ಕರ್ ಪ್ರಸಾದ್ ಆರೋಪಿಸಿದ್ದಾರೆ.

ಸುದ್ದಿ ಗೋಷ್ಠಿಯಲ್ಲಿ ಮಾತನಾಡುತ್ತಾ ಅವರು, ಪೊಲೀಸ್ ಇಲಾಖೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿಲ್ಲ. ಇದೊಂದು ಸಾಮಾನ್ಯ ಪ್ರಕರಣ ಎಂದು ಹೇಳಿರುವ ಗೃಹ ಸಚಿವರ ಹೇಳಿಕೆಯು ಇದಕ್ಕೆ ಇನ್ನಷ್ಟು ಪುಷ್ಟಿ ನೀಡುತ್ತದೆ ಎಂದಿದ್ದಾರೆ

ಗೃಹ ಸಚಿವರು, ಸ್ಥಳೀಯ ಜಿಲ್ಲಾ ಪೊಲೀಸ್ ಅಧೀಕ್ಷಕರು, ಜಿಲ್ಲಾ ಉಸ್ತುವಾರಿ ಸಚಿವರು ನೀಡುತ್ತಿರುವ ಹೇಳಿಕೆಗಳು ಒಂದಕ್ಕೊಂದು ಸಂಬಂಧವೇ ಇಲ್ಲದಂತಾಗಿದೆ. ಇನ್ನೂ ಮರಣೋತ್ತರ ವರದಿ ಬಂದಿಲ್ಲ. ಮೊದಲೇ ಇದೊಂದು ಸಾಮೂಹಿಕ ಅತ್ಯಾಚಾರವಲ್ಲ ಎಂದು ಸ್ಥಳೀಯ ಪೊಲೀಸರು ಹೇಳಿದ್ದಾರೆ. ಹೀಗೆ ಹೇಳಲು ಅವರಿಗೆ ಹೇಗೆ ಸಾಧ್ಯ. ಈಗ ಪ್ರಕರಣದ ನಿಷ್ಪಕ್ಷಪಾತ ತನಿಖೆಯ ಬಗ್ಗೆ ಆತಂಕ ಮೂಡುತ್ತಿದೆ. ಕೂಡಲೇ ಪೊಲೀಸ್ ಇಲಾಖೆ ಪ್ರಕರಣವನ್ನು ಗಂಭೀರವಾಗಿ ತೆಗೆದು ಆರೋಪಗಳನ್ನು ಬಂಧಿಸಿ ಕಠಿಣ ಶಿಕ್ಷೆಗೆ ಗುರಿಪಡಿಸಬೇಕೆಂದು ಅವರು ಆಗ್ರಹಿಸಿದ್ದಾರೆ.

Leave a Reply