ನವದೆಹಲಿ: ಸರ್ಕಾರಿ ಕಾಲೇಜುಗಳು ಮತ್ತು ವಿಶ್ವವಿದ್ಯಾಲಯಗಳ 80,000 ಉಪನ್ಯಾಸಕರು ಮತ್ತು ಅಧ್ಯಾಪಕರು ಒಂದಕ್ಕಿಂತ ಹೆಚ್ಚು ಶಿಕ್ಷಣ ಸಂಸ್ಥೆಗಳಲ್ಲಿ ಕೆಲಸ ಮಾಡುತ್ತಿದ್ದಾರೆ ಎಂಬ ವಿಷಯ ಆಧಾರ್ ಜೋಡಣೆಯಿಂದಾಗಿ ಬೆಳಕಿಗೆ ಬಂದಿದೆ. ಇದು ಯುಜಿಸಿಯ ನಿಯಮಾವಳಿಗಳ ಸ್ಪಷ್ಟ ಉಲ್ಲಂಘನೆಯಾಗಿದೆ ಎಂದು ಹೇಳಿದ ಸರ್ಕಾರ, ಈ ಕುರಿತು ತನಿಖೆಗೆ ಆದೇಶಿಸಿದೆ.

ಖಾಸಗಿ ತಾಂತ್ರಿಕ ಶಿಕ್ಷಣ ಸಂಸ್ಥೆಗಳಲ್ಲಿಯೇ ಅತಿ ಹೆಚ್ಚು (ಶೇ 90) ಅಕ್ರಮ ನಡೆದಿರುವುದಾಗಿ ಅಧಿಕಾರಿಗಳು ಹೇಳಿದ್ದು, ಈ ಬಗ್ಗೆ ಹೆಚ್ಚಿನ ಮಾಹಿತಿ ನೀಡಲು ನಿರಾಕರಿಸಿದ್ದಾರೆ.

ತನಿಖೆಯ ನಂತರ ಇಂತಹ ಚಟುವಟಿಕೆಯಲ್ಲಿ ತೊಡಗಿರುವ ಅಧ್ಯಾಪಕರ ವಿರುದ್ಧ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಕೇಂದ್ರ ಮಾನವ ಸಂಪನ್ಮೂಲ ಸಚಿವ ಪ್ರಕಾಶ್‌ ಜಾವಡೇಕರ್‌ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.

Leave a Reply