ಬೆಂಗಳೂರು: ಕರ್ನಾಟಕದ ಸಿದ್ದರಾಮಯ್ಯ ಸರಕಾರವನ್ನು 10 ಪರ್ಸೆಂಟ್ ಕಮಿಷನ್ ಸರಕಾರ ಎಂದು ಟೀಕಿಸಿದ್ದ ಬಿಜೆಪಿಯ ವಿರುದ್ಧ ಸಿಎಂ ಸಿದ್ದರಾಮಯ್ಯ ಗುಡುಗಿದ್ದಾರೆ.

ನಮ್ಮದು 10 ಪರ್ಸೆಂಟ್ ಕಮಿಷನ್ ಸರಕಾರ ಎಂದು ಹೇಳುವುದಾದರೆ ಕೇಂದ್ರದಲ್ಲಿರುವುದು 90 ಪರ್ಸೆಂಟ್‌ ಕಮಿಷನ್ ಹೊಡೆಯುವ ಸರ್ಕಾರ ಎಂದು ವಾಗ್ದಾಳಿ ನಡೆಸಿದ್ದಾರೆ.

ರಾಜ್ಯದಲ್ಲಿ 10 ಪರ್ಸೆಂಟ್ ಕಮಿಷನ್ ಪಡೆಯುವ ಸರ್ಕಾರ ಎಂದು ಕೆಲವರು ಟೀಕಿಸುತ್ತಿದ್ದಾರೆ. ಅವರಿಗೆಲ್ಲ ರಾಜಕೀಯ ವೇದಿಕೆಯಲ್ಲೇ ಉತ್ತರ ಕೊಡುತ್ತಿದ್ದೆ . ಪದೇ ಪದೇ ಟೀಕಿಸುತ್ತಿದ್ದಾರೆ. ಆದ್ದರಿಂದ ಇಲ್ಲಿಯೇ ಉತ್ತರ ನೀಡುತ್ತಿದ್ದೇನೆ.

Image result for vidhana soudha

ಬೇರೆಯವರನ್ನು ಟೀಕೆ ಮಾಡುವ ನಿಮಗೆ ನಾಚಿಕೆಯಾಗುವುದಿಲ್ಲವೇ? ಶೇಮ್ ಶೇಮ್‌’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿಧಾನಸಭೆಯಲ್ಲಿ ಹೇಳಿದರು.

ಮುಖ್ಯಮಂತ್ರಿ ಹೇಳಿಕೆ ವಿರೋಧಿಸಿ ಬಿಜೆಪಿ ಸದಸ್ಯರು ಗುರುವಾರ ಸಭಾತ್ಯಾಗ ಮಾಡಿದರು.

Leave a Reply