ಮಂಗಳೂರು: ಮೂಡಬಿದ್ರೆಯ ಆಳ್ವಾಸ್ ವಿದ್ಯಾಸಂಸ್ಥೆಯಲ್ಲಿ ಓರ್ವ ಪಿಯುಸಿ ಕಲಿಯುತ್ತಿರುವ ವಿದ್ಯಾರ್ಥಿ ಆತ್ಮಹತ್ಯೆಗೆ ಶರಣಾಗಿದ್ದಾಗಿ ವರದಿಯಾಗಿದೆ.

ಬೆಂಗಳೂರಿನ ಅಬ್ಬಿಗೆರೆಯ ತೇಜಸ್(16) ಎನ್ನುವ ವಿದ್ಯಾರ್ಥಿ ತನ್ನ ಹುಟ್ಟುಹಬ್ಬದ ದಿನವೇ ಆತ್ಮಹತ್ಯೆ ಮಾಡಿಕೊಂಡಿದ್ದು ಆಳ್ವಾಸ್ ಕ್ಯಾಂಪಸ್ ನ ನಂದಿನಿ ಹಾಸ್ಟೆಲ್‍ನಲ್ಲಿ ತೇಜಸ್ ಡೆತ್‍ನೋಟ್ ಬರೆದಿಟ್ಟು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಸಾಯುವ ಮುನ್ನ ಡೆತ್ ನೋಟ್ ಬರೆದಿದ್ದು ತನ್ನ ತಾಯಿಯ ಕಳಕೊಂಡ ನೋವು ಮತ್ತು ತಂದೆಯ ರೋಗದ ಬಗ್ಗೆ ಅದರಲ್ಲಿ ಉಲ್ಲೇಖಿಸಿ ಮನನೊಂದು ಆತ್ಮಹತ್ಯೆ ಮಾಡಿರುವುದಾಗಿ ತಿಳಿಸಲಾಗಿದೆ.

ಈ ಹಿಂದೆ ಕಾವ್ಯ ಎನ್ನುವ ವಿದ್ಯಾರ್ಥಿ ಆತ್ಮಹತ್ಯೆ ಮಾಡಿದ್ದು ದೊಡ್ಡ ವಿವಾದವಾಗಿತ್ತು.

Leave a Reply