ವಿಜಯವಾಡ: 46 ವರ್ಷದ ಯೆದುಗಿರಿ ಸಂಡಿಂಟಿ ಜಗನ್ ಮೋಹನ್ ರೆಡ್ಡಿ ಆಂಧ್ರ ಪ್ರದೇಶ ರಾಜ್ಯದ ಚುಕ್ಕಾಣಿ ಹಿಡಿದಿದ್ದಾರೆ.
ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ನಂತರ ಜಗನ್ ಮೋಹನ್ ರೆಡ್ಡಿ ರಾಜ್ಯದ ಬೆಳವಣಿಗೆಗೆ ತಮ್ಮ ದೃಷ್ಟಿಕೋನವನ್ನು ಅನಾವರಣ ಮಾಡಲಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿದ್ದವು. ಇದೀಗ ಜಗನ್ ಮೋಹನ್ ರೆಡ್ಡಿ ಯವರು ಸರ್ವರಿಗೂ ಸಮ ಬಾಳು ಸರ್ವರಿಗೂ ಸಮಪಾಲು ಎಂದು ಮುನ್ನಡೆಯುತ್ತಿದ್ದಾರೆ.
ಆಂಧ್ರಪ್ರದೇಶದ ಮುಖ್ಯಮಂತ್ರಿ ವೈ. ಎಸ್. ಜಗನ್ ಮೋಹನ್ ರೆಡ್ಡಿ ಅವರು 25 ಸದಸ್ಯರ ಕ್ಯಾಬಿನೆಟ್ನಲ್ಲಿ ಐದು ಉಪ ಮುಖ್ಯಮಂತ್ರಿಗಳನ್ನು ನೇಮಕ ಮಾಡಲು ನಿರ್ಧರಿಸಿದ್ದಾರೆ. ಶಾಸಕಾಂಗ ಪಕ್ಷದ ಸಭೆಯ ಬಳಿಕ ಅವರು ಐದು ಉಪ ಮುಖ್ಯಮಂತ್ರಿಗಳನ್ನು ನೇಮಿಸುವ ನಿರ್ಧಾರವನ್ನು ಘೋಷಿಸಿದರು.

ಎಸ್ಸಿ, ಎಸ್ಟಿ, ಹಿಂದುಳಿದ ವರ್ಗ , ಅಲ್ಪ ಸಂಖ್ಯಾತ ಮತ್ತು ಕಾಪು ಸಮುದಾಯದಿಂದ ಓರ್ವ ಉಪ ಮುಖ್ಯಮಂತ್ರಿಯನ್ನು ನೇಮಿಸಲಾಗುವುದು.
ರೆಡ್ಡಿ ಸಮುದಾಯವು ಅಧಿಕಾರದ ಸಿಂಹದ ಪಾಲು ಪಡೆಯಬಹುದೆಂಬ ನಿರೀಕ್ಷೆಗಳಿಗೆ ವಿರುದ್ಧವಾಗಿ, ದುರ್ಬಲ ವರ್ಗಗಳಿಂದ ಸಚಿವ ಸ್ಥಾನ ನೀಡಲಾಗುವುದು ಎಂದು ಅವರು ತ ತಿಳಿಸಿದರು. ಸರಕಾರದ ಕೆಲಸದ ಮೇರೆಗೆ ಪ್ರತಿ ಎರಡು ವರ್ಷಕ್ಕೆ ಇದರಲ್ಲಿ ಪುನರ್ ಚಿಂತನೆ ನಡೆಸಲಾಗುವುದು ಎಂದು ಹೇಳಿದರು. ಇದು ಅವರ ಕ್ರಾಂತಿಕಾರಿ ಹೆಜ್ಜೆಯಾಗಿದೆ ಎಂದು ಸಾರ್ವಜನಿಕ ವಲಯದಲ್ಲಿ ಅಭಿಪ್ರಾಯ ವ್ಯಕ್ತ ವಾಗಿದೆ.

Leave a Reply