ಬೆಳಗಾವಿ:‌ ಸಂವಿಧಾನ ಬದಲಾಯಿಸುತ್ತೇವೆ ಎಂದು ಹೇಳಿಕೆ ನೀಡಿ, ವಿವಾದ ಹುಟ್ಟು ಹಾಕಿರುವ ಕೇಂದ್ರ ಸಚಿವ ಅನಂತಕುಮಾರ್ ಹೆಗಡೆ ಅವರನ್ನು‌ ಒಂದೊಳ್ಳೆಯ ಚಿಕಿತ್ಸೆ ಕೊಡುವ ಹುಚ್ಚರ ಆಸ್ಪತ್ರೆ ದಾಖಲಿಸಿ ಸರಿಯಾದ ಚಿಕಿತ್ಸೆ ನೀಡಬೇಕು ಎಂದು ಹಿರಿಯ ಸಾಮಾಜಿಕ ಹೋರಾಟಗಾರ ಅಣ್ಣಾ ಹಜಾರೆ ಹೇಳಿದರು.

ಮಹಾರಾಷ್ಟ್ರದ ರಲೇಗಾನ್ ಸಿದ್ಧಿಯಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಭಾರತ ದೇಶ ನಿಂತಿರುವುದೇ ಸಂವಿಧಾನದ ಆಶಯಗಳ ಮೇಲೆ, ಸಂವಿಧಾನ ಬದಲಾಯಿಸುತ್ತೇವೆ ಎಂದು ಹೇಳುವುದು ಸರಿಯಲ್ಲ‌ ಎಂದು ಅನಂತ್ ಕುಮಾರ್ ಹೆಗ್ಡೆ ವಿರುದ್ಧ ಆಕ್ರೋಶವನ್ನು ವ್ಯಕ್ತಪಡಿಸಿದರು.

ಇದೇ ವೇಳೆಯಲ್ಲಿ ನೋಟ್ ಬ್ಯಾನ್ ಕುರಿತು ಮಾತನಾಡಿದ ಅವರು, ನೋಟ್ ಬ್ಯಾನ್ ವಿಚಾರದಲ್ಲಿ ಪ್ರಧಾನಿ ಮೋದಿಯವರು ಸಂಪೂರ್ಣ ವಿಫಲರಾಗಿದ್ದಾರೆ. ಹಾಗೂ ಭಾರತವನ್ನು ಭ್ರಷ್ಟಾಚಾರ ರಹಿತ ದೇಶವನ್ನಾಗಿ ಮಾಡುವುದು ಕೂಡ ಅವರಿಂದ ಸಾಧ್ಯವಾಗಿಲ್ಲ ಎಂದರು.

Leave a Reply