ಭಾರತದ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರು ಮೂತ್ರನಾಳ ಸೋಂಕು ಹಾಗೂ ಇನ್ನಿತರ ವಯೋಸಹಜ ಅನಾರೋಗ್ಯಗಳ ಕಾರಣದಿಂದ ಏಮ್ಸ್ ಆಸ್ಪತ್ರೆಗೆ ಹಲವು ದಿನಗಳ ಹಿಂದೆಯೇ ದಾಖಲಾಗಿದ್ದು, ಇದೀಗ ಅಟಲ್ ಬಿಹಾರಿ ವಾಜಪೇಯಿ ಚಿಕಿತ್ಸೆಗೆ ಸ್ಪಂದಿಸದೇ ನಿಧನರಾಗಿದ್ದಾರೆ ಏಮ್ಸ್ ಆಸ್ಪತ್ರೆಯು ಹೇಳಿಕೆ ನೀಡಿದೆ. ಹಲವಾರು ನಾಯಕರು ವಾಜಪೇಯಿ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ.

ಅಟಲ್ ಬಿಹಾರಿ ವಾಜಪೇಯಿ ಅವರ ಕಿರು ಪರಿಚಯ

ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ 90ನೇ ಹುಟ್ಟುಹಬ್ಬದ ಮುನ್ನಾ ದಿನ ನರೇಂದ್ರ ಮೋದಿ ನೇತೃತ್ವದ ಎನ್ ಡಿಎ ಸರ್ಕಾರ ಭಾರತ ರತ್ನ ಪ್ರಶಸ್ತಿಯನ್ನು ಘೋಷಿಸಿತ್ತು. 2005ರಲ್ಲಿ ಸಕ್ರಿಯ ರಾಜಕೀಯದಿಂದ ದೂರ ಉಳಿದಿರುವ ವಾಜಪೇಯಿ ಅವರನ್ನು ಬಿಜೆಪಿಯ ವಿರೋಧಿಸುವವರೂ ಗೌರವದಿಂದ ಕಾಣುತ್ತಾರೆ. ಪ್ರೋಖ್ರಾನ್ ಅಣು ಪರೀಕ್ಷೆ, ಪಾಕಿಸ್ತಾನದೊಂದಿಗೆ ಬಾಂಧವ್ಯ ಬೆಸೆಯುವ ಸಾರಿಗೆ ವ್ಯವಸ್ಥೆ, ಪ್ರಧಾನಮಂತ್ರಿ ಗ್ರಾಮ ಸಡಕ್ ಯೋಜನೆ, ಸುವರ್ಣ ಚತುಷ್ಪಥ ಯೋಜನೆ, ಸರ್ವ ಶಿಕ್ಷಾ ಅಭಿಯಾನ ಮುಂತಾದವು ವಾಜಪೇಯಿ ಅವರ ದೂರದೃಷ್ಟಿತ್ವದ ಫಲವಾಗಿದೆ.

ಅಟಲ್ ಬಿಹಾರಿ ವಾಜಪೇಯಿ (ಜನನ ಡಿಸೆಂಬರ್ 25, 1924) ಅಟಲ್ ಅವರು ಹುಟ್ಟಿದ್ದು ಕ್ರಿಸ್‍ಮಸ್ ದಿನದಂದು. ಭಾರತದ ರಾಜಕೀಯದಲ್ಲಿ ಬಹುಕಾಲದಿಂದ ಸಕ್ರಿಯರಾಜಕಾರಣಿಯಾಗಿ ತಮ್ಮ ಅಪೂರ್ವ ಯೋಗದಾನವನ್ನು ನೀಡಿದ್ದಾರೆ. ಅವರೊಬ್ಬ ಕವಿ, ಹೆಸರಾಂತ ಪತ್ರಕರ್ತ, ಶ್ರೇಷ್ಠ ವಾಗ್ಮಿ, ಚಿಂತಕ, ದಾರ್ಶನಿಕ, ನಿಸ್ವಾರ್ಥ ರಾಜಕಾರಣಿ, ಹಾಗೂ ನುಡಿದಂತೆ ನಡೆಯುವ ಮಾನವತಾವಾದಿಯಾಗಿ ಭಾರತ, ಹಾಗೂ ವಿಶ್ವದಲ್ಲಿ ಹೆಸರುವಾಸಿಯಾಗಿದ್ದಾರೆ.

1951 – ಭಾರತೀಯ ಜನ ಸಂಘ್ ಪಕ್ಷದ ಸಂಸ್ಥಾಪನೆ
1957 – ಎರಡನೇ ಲೋಕಸಭೆಗೆ ಚುನಾಯಿತರಾಗಿದ್ದು
1957-77 – ಸಂಸತ್ ನಲ್ಲಿ ಭಾರತೀಯ ಜನಸಂಘ್ ಪಕ್ಷದ ನಾಯಕನಾಗಿದ್ದು
1962 – ರಾಜ್ಯ ಸಭೆಯ ಸದಸ್ಯರಾಗಿದ್ದು
1966 – 67 – ಸರ್ಕಾರಿ ಖಾತ್ರಿ ಸಮಿತಿಯ ಛೇರ್ಮನ್
1967 – ನಾಲ್ಕನೇ ಲೋಕಸಭೆಗೆ ಮರು ಚುನಾಯಿತರಾಗಿದ್ದು
1967-70 – ಸಾರ್ವಜನಿಕ ಖಾತೆ ಸಮಿತಿಗೆ ಛೇರ್ಮನ್
1968-73 – ಭಾರತೀಯ ಜನಸಂಘ್ ಪಕ್ಷದ ಅಧ್ಯಕ್ಷರಾಗಿ
1971 – ಐದನೇ ಲೋಕಸಭೆಗೆ ಮರುಚುನಾಯಿತರಾಗಿದ್ದು
1977 – ಆರನೇ ಲೋಕಸಭೆಗೆ ಮರು ಚುನಾಯಿತರಾಗಿದ್ದು
1977 – 79 – ಕೇಂದ್ರ ವಿದೇಶಾಂಗ ವ್ಯವಹಾರಗಳ ಖಾತೆ ಸಚಿವರಾಗಿ
1977 – 80 – ಜನತಾ ಪಕ್ಷದ ಸಂಸ್ಥಾಪಕ ಸದಸ್ಯರಾಗಿ
1980 – ಏಳನೇ ಲೋಕಸಭೆಗೆ ಮರುಚುನಾಯಿತರಾಗಿದ್ದು
1980-86 – ಭಾರತೀಯ ಜನತಾ ಪಕ್ಷದ ಅಧ್ಯಕ್ಷರಾಗಿ


1980-84, 1986 ಹಾಗು 1993 – 96 – ಸಂಸತ್ ನಲ್ಲಿ ಬಿ ಜೆ ಪಿ ನಾಯಕ ರಾಗಿ
1986 – ರಾಜ್ಯಸಭಾ ಸದಸ್ಯರಾಗಿ
1988 – 90 – ಗೃಹ ಸಮಿತಿ ಸದಸ್ಯರಾಗಿ ಹಾಗು ವ್ಯಾಪಾರ ವ್ಯವಹಾರ ಸಲಹಾ ಸಮಿತಿಯ ಸದಸ್ಯರಾಗಿ
1991 – ಹತ್ತನೇ ಲೋಕಸಭೆಗೆ ಮರು ಚುನಾಯಿತರಾಗಿದ್ದು
1991-93 – ಸಾರ್ವಜನಿಕ ಖಾತೆ ಸಮಿತಿಯ ಛೇರ್ಮನ್
1993-96 – ವಿದೇಶಾಂಗ ವ್ಯವಹಾರಗಳ ಸಮಿತಿ ಛೇರ್ಮನ್ ಹಾಗು ಲೋಕಸಭಾ ವಿಋಒಶ ಪಕ್ಷದ ನಾಯಕ
1996- ಹನ್ನೊಂದನೇ ಲೋಕಸಭೆಗೆ ಮರುಚುನಾಯಿತ
16 ಮೇ 1996 – 31 ಮೇ 1996 – ಭಾರತದ ಪ್ರಧಾನ ಮಂತ್ರಿಯಾಗಿ
1996-97 – ಲೋಕಸಭೆಯ ವಿರೋಧ ಪಕ್ಷದ ನಾಯಕರಾಗಿ
1997-98 – ವಿದೇಶಾಂಗ ವ್ಯವಹಾರಗಳ ಸಮಿತಿ ಛೇರ್ಮನ್
1998 – ಹನ್ನೆರಡನೆ ಲೋಕಸಭೆಗೆ ಮರುಚುನಾಯಿತರಾಗಿದ್ದು
1998-99 – ಭಾರತದ ಪ್ರಧಾನ ಮಂತ್ರಿಗಳು, ವಿದೇಶಾಂಗ ವ್ಯವಹಾರಗಳ ಖಾತೆ ಸಚಿವರು ಹಾಗು ಹಂಚಿಕೆಯಾಗದೆ ಉಳಿಕೆಯಾದ ಖಾತೆಗಳ ಸಚಿವರು
1999 – ಹದಿಮೂರನೇ ಲೋಕಸಭೆಗೆ ಮರುಚುನಾಯಿತರಾಗಿದ್ದು
13 ಅಕ್ಟೋಬರ್ 1999 ರಿಂದ 13 ಮೇ 2004 ರವರೆಗೆ – ಭಾರತದ ಪ್ರಧಾನ ಮಂತ್ರಿಗಳಾಗಿ
2004 – ಹದಿನಾಲ್ಕನೇ ಲೋಕಸಭೆಗೆ ಮರುಚುನಾಯಿತರಾಗಿದ್ದು
2005 – ಸಕ್ರಿಯ ರಾಜಕಾರಣದಿಂದ ನಿವೃತ್ತಿ ಘೋಷಣೆ

ಪ್ರಶಸ್ತಿ /ಗೌರವ / ಸನ್ಮಾನಗಳು

1992 ರಲ್ಲಿ, ಪದ್ಮ ವಿಭೂಷಣ.
1994 ರಲ್ಲಿ, ಲೋಕಮಾನ್ಯ ತಿಲಕ್ ಪ್ರಶಸ್ತಿ.
1994 ರಲ್ಲಿ, ಉತ್ತಮ ರಾಜಕೀಯ ಪಟು ಗೌರವ.
1994 ರಲ್ಲಿ, ಪಂಡಿತ್ ಗೋವಿಂದ್ ವಲ್ಲಭ್ ಪಂತ್ ಪ್ರಶಸ್ತಿ.
2015 ರಲ್ಲಿ ಭಾರತ ರತ್ನ ಪ್ರಶಸ್ತಿ.
2015 ರಲ್ಲಿ, ಬಾಂಗ್ಲಾ ವಿಮೋಚನಾ ಯುದ್ಧ ಪ್ರಶಸ್ತಿ.

Leave a Reply