ಹೊಸವರ್ಷವನ್ನು ಮೋಜು ಮಸ್ತಿ, ಕುಡಿದು ಕುಪ್ಪಳಿಸಿ ಅಥವಾ ಇತರರಿಗೆ ಕೀಟಲೆ ಕೊಟ್ಟು ಆಚರಿಸುವವರಿದ್ದಾರೆ. ಪ್ರತಿವರ್ಷ ಇಂತಹ ಹಲವಾರು ಪ್ರಕರಣಗಳು ಮರುದಿನ ಬೆಳಕಿಗೆ ಬರುತ್ತದೆ. ಆದರೆ ಬೆಂಗಳೂರಿನ ಕೆ.ಆರ್ ಮಾರ್ಕೆಟ್‍ನಲ್ಲಿ ಹೊಸವರ್ಷವನ್ನು ಅರ್ಥಪೂರ್ಣವಾಗಿ ಆಚರಿಸಲಾಗಿದೆ.

ಭಾರತ ಅಂಧ ಕ್ರಿಕೆಟ್ ತಂಡದ ಮಾಜಿ ನಾಯಕ ಶೇಖರ್ ನಾಯ್ಕ್ ಯುವ ಜನತೆಗೆ ಮಾದರಿಯಾಗೋ ರೀತಿಯಲ್ಲಿ ಹೊಸವರ್ಷವನ್ನು ಆಚರಿಸಿ ಜನರ ಕಣ್ಣು ತೆರೆಸಿದ್ದಾರೆ. ಕೆ.ಆರ್ ಮಾರ್ಕೆಟ್, ವಿವಿ ಪುರ, ಜೆಪಿ ನಗರದಲ್ಲಿ ನಿರಾಶ್ರಿತರಿಗೆ ತಿಂಡಿ ಹಾಗೂ ಹೊದಿಕೆಯನ್ನು ನೀಡುವ ಮೂಲಕ ಎಲ್ಲರಿಗೂ ಮಾದರಿಯಾಗಿದ್ದಾರೆ. ಚಳಿಯಲ್ಲಿ ಬೀದಿಯಲ್ಲೇ ಮಲಗಿರುವವರಿಗೆ ಹೊದಿಕೆ, ತಿಂಡಿ ನೀಡಿ ಹೊಸ ವರ್ಷಾಚರಣೆಯಲ್ಲೂ ಮಾನವೀಯತೆ ಮೆರೆದಿದ್ದಾರೆ. ಇಂತಹವರಿಗೆ ನಿಜಕ್ಕೂ ಒಂದು ಸೆಲ್ಯೂಟ್.

Leave a Reply