ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಪ್ರಚಂಡ ಗೆಲುವು ಸಾಧಿಸಿ ಎರಡನೇ ಅವಧಿಗೆ ಕೇಂದ್ರದಲ್ಲಿ ಸರ್ಕಾರ ರಚನೆಗೆ ಸಿದ್ಧತೆ ನಡೆಸಿದೆ. ಈ ಬಗ್ಗೆ ದೇಶದಾದ್ಯಂತ ಬಿಜೆಪಿ ಕಾರ್ಯಕರ್ತರು ಸಂಭ್ರಮ ಆಚರಿಸಿದರೆ, ಮಧ್ಯ ಪ್ರದೇಶದಲ್ಲಿ ವ್ಯಕ್ತಿಯೊಬ್ಬರು ಬಿಜೆಪಿ ಗೆದ್ದ ಬೇಸರದಲ್ಲಿ ತನ್ನ ತಲೆ ಬೋಳಿಸಿದ್ದಾರೆ.
ಮಧ್ಯಪ್ರದೇಶದ ರಾಜ್ಗಢದಲ್ಲಿ ಕಾಂಗ್ರೆಸ್ ಕಾರ್ಯಕರ್ತ ಬಿ.ಎಲ್ ಸೇನ್ ನರೇಂದ್ರ ಮೋದಿ ಮತ್ತೊಮ್ಮೆ ಪ್ರಧಾನಿಯಾಗುವುದನ್ನು ಕಂಡು ತನ್ನ ತಲೆ ಬೋಳಿಸಿದ್ದಾರೆ. ನಿಜವಾಗಿ ಸೇನ್, ನರೇಂದ್ರ ಮೋದಿ ಎರಡನೇ ಅವಧಿಗೆ ಪ್ರಧಾನಿಯಾಗುವುದಿಲ್ಲ ಎಂದು ಬಿಜೆಪಿ ಕಾರ್ಯಕರ್ತರೊಂದಿಗೆ ಚಾಲೆಂಜ್ ಮಾಡಿದ್ದರು. ಒಂದು ವೇಳೆ ನರೇಂದ್ರ ಮೋದಿ ಪ್ರಧಾನಿಯಾದರೆ ನಾನು ತಲೆ ಬೋಳಿಸುತ್ತೇನೆ ಅಥವಾ ರಾಹುಲ್ ಗಾಂಧಿಯವರು ಪ್ರಧಾನಮಂತ್ರಿಯಾದರೆ ನೀವು ತಲೆಯನ್ನು ಬೋಳಿಸಬೇಕು ಎಂದು ಅವರು ಬಿಜೆಪಿ ಕಾರ್ಯಕರ್ತನೋರ್ವನಲ್ಲಿ ಷರತ್ತು ವಿಧಿಸಿದ್ದರು. ಇದೀಗ ನನ್ನ ಪಕ್ಷ ಸೋತು ಹೋಗಿದೆ. ಆದ್ದರಿಂದ ಕೊಟ್ಟ ಮಾತಿನಂತೆ ನಾನು ನನ್ನ ತಲೆಯನ್ನು ಬೋಳಿಸಿದ್ದೇನೆ ಎಂದು ಅವರು ಹೇಳಿದ್ದಾರೆ.

ಇತ್ತೀಚೆಗೆ ನಡೆದ ಲೋಕಸಭಾ ಚುನಾವಣೆಯಲ್ಲಿ, ಒಟ್ಟು 542 ರಲ್ಲಿ ಬಿಜೆಪಿ 303 ಸ್ಥಾನಗಳನ್ನು ಗೆದ್ದು ಕೊಂಡಿದೆ. ಏಪ್ರಿಲ್ 11 ಮತ್ತು ಮೇ 19 ರ ನಡುವೆ ಏಳು ಹಂತಗಳಲ್ಲಿ ಚುನಾವಣೆಗೆ ನಡೆದಿದ್ದು, ಎನ್ಡಿಎ ಈ ಬಾರಿ 353 ಸ್ಥಾನಗಳನ್ನು ಬಾಚಿಕೊಂಡಿದೆ . ಏತನ್ಮಧ್ಯೆ, ಯುಪಿಎ 92 ಸ್ಥಾನಗಳನ್ನು ಹೊಂದಿದ್ದು, ಕಾಂಗ್ರೆಸ್ ಕೇವಲ 52 ಸ್ಥಾನಗಳನ್ನು ಹೊಂದಿದೆ.

Leave a Reply