ಬೆಳಗಾವಿ: ಅಕ್ರಮ ಆಸ್ತಿ ಸಂಪಾದನೆ ಹೊಂದಿದ್ದ ಆರೋಪದ ಮೇಲೆ,. ಅಥಣಿಯ ಕೃಷ್ಣಾ ಮೇಲ್ದಂಡೆ ಯೋಜನೆಯ ವಿಶೇಷ ಭೂಸ್ವಾಧೀನಾಧಿಕಾರಿ ರಾಜಶ್ರೀ ಜೈನಾಪುರೆ ಅವರ ಪತಿಯ ಅಣ್ಣನ ಮನೆ ಮೇಲೆ ಭ್ರಷ್ಟಾಚಾರ ನಿಗ್ರಹ ದಳದ ಅಧಿಕಾರಿಗಳು ಫೆ. 9 ಶುಕ್ರವಾರ ಬೆಳಿಗ್ಗೆ ದಾಳಿ ನಡೆಸಿದ್ದಾರೆ.

ಬೆಳಗಾವಿ ಉಪ ವಿಭಾಗಾಧಿಕಾರಿ ಆಗಿ ಕಾರ್ಯ ನಿರ್ವಹಿಸಿತ್ತಿರುವ ರಾಜಶ್ರೀ ಜೈನಾಪುರೆ ಅವರ, ಪತಿಯ ಅಣ್ಣ ಅಕ್ರಮ ಆಸ್ತಿ ಸಂಪಾದನೆ ಮಾಡಿದ್ದಾರೆ ಎಂಬ ಆರೋಪ ಇತ್ತೀಚಿಗೆ ಕೇಳಿ ಬಂದಿದ್ದು, ಹುಬ್ಬಳ್ಳಿಯ ‌ಕೇಶ್ವಾಪುರದಲ್ಲಿರುವ ಜೈನಾಪುರೆ ಪತಿಯ ಅಣ್ಣನ ನಿವಾಸದ ಮೇಲೆ ದಾಳಿ ನಡೆಸಲಾಗಿದೆ. ಅಧಿಕಾರಿಗಳು ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ‌ ಎಂದು ವರದಿಯಾಗಿದೆ.

ಮತ್ತೊಂದು ವರದಿಯ ಪ್ರಕಾರ ಕೊಪ್ಪಳ ಜಿಲ್ಲೆಯ ಗಂಗಾವತಿ ಜಯನಗರದಲ್ಲಿ ಜಿಲ್ಲಾ ಪಂಚಾಯಿತಿಯ ಎಇಇ ಮನೆ ಹಾಗೂ ಕಚೇರಿ ಮೇಲೆ ಎಸಿಬಿ ದಾಳಿ ನಡೆಸಿದೆ. ಮತ್ತು. ಉಡುಪಿ ಅಬಕಾರಿ ಉಪ ಅಧೀಕ್ಷಕ ವಿನೋದ್ ಕುಮಾರ್ ಅವರ ಮಂಗಳೂರಿನ ನಿವಾಸದ ಮೇಲೆ ಭ್ರಷ್ಟಾಚಾರ ನಿಗ್ರಹ ದಳದ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಮನೆಯೂ ಸೇರಿದಂತೆ ಒಟ್ಟು ಆರು ಕಡೆ ದಾಳಿ ನಡೆದಿದೆ. ಅಕ್ರಮ ಆಸ್ತಿ ಗಳಿಕೆ ದೂರಿನ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಎಸಿಬಿ ಎಸ್ಪಿ ಅವರ ನೇತೃತ್ವದಲ್ಲಿ ದಾಳಿ ನಡೆದಿದೆ ಎಂದು ತಿಳಿದು ಬಂದಿದೆ.

Leave a Reply