ಬೆಂಗಳೂರು: ದಲಿತರ ಅಭಿವೃದ್ಧಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅನೇಕ ಯೋಜನೆಗಳನ್ನು ಜಾರಿಗೆ ತಂದಿದ್ದಾರೆ. ಆದ್ದರಿಂದ ಮುಂದಿನ ಚುನಾವಣೆಯಲ್ಲಿ ಅವರಿಗೆ ಮತ ಹಾಕುವ ಮೂಲಕ ಸಿದ್ದರಾಮಯ್ಯ ರವರ ಋಣ ತೀರಿಸಬೇಕೆಂದು ಸಮಾಜ ಕಲ್ಯಾಣ ಇಲಾಖೆ ಸಚಿವ ಎಚ್‌. ಆಂಜನೇಯ ಹೇಳಿದ್ದಾರೆ.

ಕರ್ನಾಟಕ ರಾಜ್ಯ ಎಸ್ಸಿ, ಎಸ್ಟಿ ಉದ್ಯಮಿಗಳ ಸಂಘದ ನೇತೃತ್ವದಲ್ಲಿ ನಡೆದ ಬಜೆಟ್‌ ಪೂರ್ವ ಸಭೆಯಲ್ಲಿ ಮಾತನಾಡುತ್ತಿದ್ದರು.

ಎಸ್ಸಿ, ಎಸ್ಟಿ ಗುತ್ತಿಗೆದಾರರಿಗೆ 50 ಲಕ್ಷದವರೆಗಿನ ಮೀಸಲಾತಿ ಪ್ರಮಾಣವನ್ನು 1 ಕೋಟಿ ರೂ.ಗೆ ಹೆಚ್ಚಿಸುವ ಪ್ರಸ್ತಾವನೆಯನ್ನು ಸರ್ಕಾರದ ಮುಂದಿಡಲಾಗಿದೆ. ಬರುವ ಬಜೆಟ್‌ನಲ್ಲಿ ಈ ಯೋಜನೆ ಘೋಷಣೆಯಾಗುವ ಸಾಧ್ಯತೆಯಿದೆ ಹೊಸ ಉದ್ದಿಮೆ ಸ್ಥಾಪನೆಗೆ ಶೇ.4ರ ದರದಲ್ಲಿ 10 ಕೋಟಿವರೆಗೂ ಸಾಲ ನೀಡಲಾಗುತ್ತಿದೆ. ಕಟ್ಟಡ ನಿರ್ಮಾಣ ಹಾಗೂ ಹಾಸ್ಟೆಲ್‌ ನಿರ್ಮಾಣಕ್ಕೂ ಶೇ.10 ಸಬ್ಸಿಡಿ ನೀಡಲಾಗುತ್ತಿದೆ. ದಲಿತರು ಉದ್ಯಮಿಗಳಾಗುವ ಕಡೆಗೆ ಹೆಚ್ಚಿನ ಆದ್ಯತೆ ನೀಡಬೇಕು. ಸರ್ಕಾರ ವಿವಿಧ ಇಲಾಖೆಗಳಲ್ಲಿ ನಡೆಸುವ
ನೇರ ನೇಮಕಾತಿಯಲ್ಲಿ ಉದ್ಯೋಗ ನೀಡುವಂತೆ ಅನೇಕ ಎಸ್ಸಿ, ಎಸ್ಟಿ ಸಮುದಾಯದ ಯುವಕರು ಹಿಂದೆ ಬೀಳುತ್ತಾರೆ.
ಅದರ ಬದಲು ಸರ್ಕಾರ ನೀಡುವ ಸಾಲ ಸೌಲಭ್ಯ ಪಡೆದು ಸ್ವಂತ ಉದ್ಯಮ ಸ್ಥಾಪಿಸಬೇಕು ಎಂದರು.

Leave a Reply