ಬೆಂಗಳೂರು : ಕೇಂದ್ರ ಸರಕಾರ ಹೊಸದಾಗಿ ಜಾರಿಗೆ ತರಲು ಹೊರಟಿರುವ ಇ-ಫಾರ್ಮಸಿ ಯನ್ನು ವಿರೋಧಿಸಿ ಔಷಧಿ ಮಾರಾಟಗಾರರು ಮೆಡಿಕಲ್ ಗಳ ದೇಶಾದ್ಯಂತ ಬಂದ್ ಗೆ ಕರೆ ಕೊಟ್ಟಿದ್ದಾರೆ. ಆದ್ದರಿಂದ ಅಖಿಲ ಭಾರತ ಔಷಧಿ ಮಾರಾಟ ವ್ಯಾಪಾರಿಗಳ ಸಂಘ (ಎಐಒಸಿಡಿ) ರಾಷ್ಟ್ರವ್ಯಾಪಿ ಮುಷ್ಕರಕ್ಕೆ ಕರೆ ನೀಡಿದ್ದರಿಂದ ಇಂದು ಮಧ್ಯರಾತ್ರಿಯವರೆಗೆ ದೇಶದ ಯಾವುದೇ ಮೆಡಿಕಲ್ ಶಾಪ್ ಗಳು ಕಾರ್ಯ ನಿರ್ವಹಿಸದೇ ಬಂದ್ ಗೆ ಬೆಂಬಲ ನೀಡಿರುವುದರಿಂದ ತುರ್ತು ಔಷಧಿಗಾಗಿ ರೋಗಿಗಳು ಪರದಾಡುವ ಪರಿಸ್ಥಿತಿ ನಿರ್ಮಾಣ ಆಗಿದೆ.

ಈ ಸಂದರ್ಭದಲ್ಲಿ ಟ್ವೀಟ್ ಮಾಡಿದ ವೈದ್ಯಕೀಯ ಶಿಕ್ಷಣ ಹಾಗೂ ಜಲ ಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್, ಒಂದು ವೇಳೆ ಮೆಡಿಕಲ್ ಸ್ಟೋರ್ ಗಳನ್ನು ಬಂದ್ ಮಾಡಿದರೆ ಅಂತಹ ಅಂಗಡಿಗಳ ಲೈಸೆನ್ಸ್ ರದ್ದು ಮಾಡುತ್ತೇನೆ ಎಂದುಎಚ್ಚರಿಕೆ ನೀಡಿದ್ದಾರೆ.


ಸರ್ಕಾರಿ ವೈದ್ಯಕೀಯ ಕಾಲೇಜುಗಳು ಮತ್ತು ಆಸ್ಪತ್ರೆಗಳ ಆವರಣದೊಳಗೆ ಎಲ್ಲಾ ಮೆಡಿಕಲ್ ಅಂಗಡಿಗಳು ನಾಳೆ ಮುಕ್ತವಾಗಿ ತೆರೆದು ಅಗತ್ಯವಿರುವ ನಾಗರಿಕರಿಗೆ ಅಗತ್ಯ ಸೇವೆಗಳನ್ನು ಒದಗಿಸಬೇಕು. ಒಂದು ವೇಳೆ ಈ ಸಂದರ್ಭದಲ್ಲಿ ಮಳಿಗೆ ಮುಚ್ಚಿದರೆ ಕಠಿಣ ಕ್ರಮ ತೆಗೆದು ಕೊಳ್ಳಲಾಗುವುದು ಎಂದು ಅವರು ಟ್ವೀಟ್ ಮಾಡಿದ್ದಾರೆ.

ರಾಜ್ಯದಲ್ಲಿ ಒಟ್ಟು 24 ಸಾವಿರ ಮೆಡಿಕಲ್ ಶಾಪ್‍ಗಳು ಬಂದ್ ಆಗಲಿದ್ದು ಮತ್ತು ಇನ್ನು ದೇಶಾದ್ಯಂತ ಸುಮಾರು 85 ಲಕ್ಷ ಮೆಡಿಕಲ್ ಶಾಪ್ ಗಳು ಇವೆ.

Leave a Reply