ಭೋಪಾಲ್: ಹೊಟ್ಟೆಯಲ್ಲೇ ಮಗು ಸತ್ತಿದೆ ಎಂದು ಡಾಕ್ಟರ್ ಹೇಳಿದರು. ಆದರೆ ಮಹಿಳೆಯೋರ್ವರು ತೆರದ ಮೈದಾನದಲ್ಲಿ ಮಗುವಿಗೆ ಜನ್ಮ ನೀಡಿದ ಘಟನೆ ನಡೆದಿದೆ.

ಮಧ್ಯಪ್ರದೇಶದ ದಿಂಡೋರಿ ಜಿಲ್ಲೆಯೊಂದರ ಪುಟ್ಟ ಗ್ರಾಮದ 24 ವರ್ಷದ ಸಮರ್ವತಿ ದೇವಿಎಂಬ 8 ತಿಂಗಳ ಗರ್ಭಿಣಿ ಹೊಟ್ಟೆ ನೋವಿನಿಂದ ಬಳಲುತ್ತಿದ್ದು, ಸ್ಥಳೀಯ ಜಿಲ್ಲಾಸ್ಪತ್ರೆಗೆ ತೆರಳಿದ್ದರು. ಹೊಟ್ಟೆಯಲ್ಲಿ ಮಗು ಸತ್ತಿದೆ ಎಂದು ಡಾಕ್ಟರ್ ಹೇಳಿ ಹೆರಿಗೆಗೆ ನಿರಾಕರಿಸಿದರು. ಅಲ್ಲಿ ಕಿರುಚಿದಾಗ ನರ್ಸ್ ತನ್ನ ಕೆನ್ನೆಗೆ ಭಾರಿಸಿದ್ದಾಗಿ ಮಹಿಳೆ ಆರೋಪಿಸಿದ್ದಾರೆ.

ಅಲ್ಲಿಂದ ಸಂಬಂಧಿಕರ ಮನೆಗೆ ಬರುವಾಗ ದಾರಿ ಮಧ್ಯೆ ಮಹಿಳೆ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ಗ್ರಾಮಸ್ಥರ ಹೆರಿಗೆ ನಡೆದಿದ್ದು ತಾಯಿ ಮಗು ಆರೋಗ್ಯದಿಂದಿದ್ದಾರೆ ಎಂದು ವರದಿಯಾಗಿದೆ.

ಆಸ್ಪತ್ರೆಯ ಅಮಾನವೀಯ ಕ್ರಮದ ಬಗ್ಗೆ ಖಂಡನೆ ವ್ಯಕ್ತವಾಗಿದೆ. ಮಹಿಳೆಯನ್ನು ಆಸ್ಪತ್ರೆಗೆ ದಾಖಲಿಸಿಕೊಳ್ಳಲು ನಿರಾಕರಿಸಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುತ್ತೇವೆ. ಅಗತ್ಯ ಬಿದ್ದರೆ ಅಂತಹ ಸಿಬ್ಬಂದಿಯನ್ನು ಕೆಲಸದಿಂದ ವಜಾ ಮಾಡುತ್ತೇವೆ. ಇನ್ನು ಮುಂದೆ ಇಂತಹ ಘಟನೆಗಳು ನಡೆಯದಂತೆ ನೋಡಿಕೊಳ್ಳುವುದಾಗಿ ಮುಖ್ಯ ವೈದ್ಯಾಧಿಕಾರಿ ಆರ್ ಕೆ ಮೆಹ್ರಾ ಭರವಸೆ ನೀಡಿದ್ದಾರೆ.

Leave a Reply