ವೈದ್ಯಕೀಯ ಅಲಕ್ಷ್ಯದ ಆಘಾತಕಾರಿ ಘಟನೆ ಉತ್ತರ ಪ್ರದೇಶದಲ್ಲಿ ವರದಿಯಾಗಿದೆ. ಆಸ್ಪತ್ರೆಯಲ್ಲಿ ವಿದ್ಯುತ್ ಇಲ್ಲದ ಕಾರಣ ಉತ್ತರ ಪ್ರದೇಶದ ಸರ್ಕಾರಿ ಆಸ್ಪತ್ರೆಯಲ್ಲಿ ಟಾರ್ಚ್‌ ಬೆಳಕಿನಲ್ಲೇ 32 ಜನರ ಕಣ್ಣಿನ ಪೊರೆ ಶಸ್ತ್ರಚಿಕಿತ್ಸೆ ನಡೆಸಲಾಗಿದೆ ಎನ್ನುವ ವರದಿಗಳಿಗೆ ಸಂಬಂಧಿಸಿದಂತೆ ಜಿಲ್ಲಾಡಳಿತ ತನಿಖೆಗೆ ಆದೇಶಿಸಿದೆ.
ನವಾಬ್‌ಗಂಜ್‌ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಶಸ್ತ್ರಚಿಕಿತ್ಸೆ ನಡೆದಿದ್ದು, ಅಲ್ಲಿ ವಿದ್ಯುತ್ ವ್ಯತ್ಯಯ ಇದ್ದು, ಪರ್ಯಾಯ ವಿದ್ಯುತ್‌ ವ್ಯವಸ್ಥೆಯೂ ಇರಲಿಲ್ಲ ಎಂದು ವರದಿಯಾಗಿದೆ.

ಶಸ್ತ್ರಚಿಕಿತ್ಸೆ ಬಳಿಕ ರೋಗಿಗಳಿಗೆ ಹಾಸಿಗೆಯನ್ನೂ ನೀಡಿರಲಿಲ್ಲ, ಹೀಗಾಗಿ ಅತೀವ ಚಳಿಯಲ್ಲೂ ಅವರು ನೆಲದಲ್ಲೇ ಮಲಗಬೇಕಾಯಿತು ಎಂದು ರೋಗಿಗಳ ಸಂಬಂಧಿಕರು ದೂರಿದ್ದಾರೆ.

ಪಿಟಿಐ ವರದಿಯ ಪ್ರಕಾರ, ಜಿಲ್ಲಾಡಳಿತ ಈ ವಿಷಯವನ್ನು ತನಿಖೆಗೆ ಆದೇಶಿಸಿದ್ದಾರೆ. ಆಸ್ಪತ್ರೆಯು ತಪ್ಪಿತಸ್ಥರೆಂದು ಪರಿಗಣಿಸಿದರೆ ಕಪ್ಪುಪಟ್ಟಿಗೆ ಸೇರಿಸಲಾಗುವುದು ಎಂದು
ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಾಜೇಂದ್ರ ಪ್ರಸಾದ್ ಹೇಳಿದರು.

ಕಣ್ಣಿನ ರೋಗಿಗಳನ್ನು ನಿರ್ವಹಿಸುತ್ತಿದ್ದ ಸಮುದಾಯ ಆರೋಗ್ಯ ಕೇಂದ್ರದಲ್ಲಿ (CHC) ವೈದ್ಯರ ವಿರುದ್ಧ ತನಿಖೆ ನಡೆಸಲಾಗುತ್ತಿದೆ.

Leave a Reply