ಅತ್ಯಾಚಾರಕ್ಕೊಳಗಾದ ಮಗಳನ್ನು ಕೈಯಾರೆ ಎತ್ತಿ ಆಸ್ಪತ್ರೆಗೆ ಸಾಗಿಸಿದ ಅಸಹಾಯಕ ತಂದೆಯ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ಎಲ್ಲರನ್ನು ದಿಗ್ಭ್ರಮೆಗೊಳಿಸಿದೆ.

ಐದು ರೂಪಾಯಿ ಆಮಿಷವೊಡ್ಡಿ ಪುಟ್ಟ ವಿದ್ಯಾರ್ಥಿಯನ್ನು ಶಾಲೆಯ ಪಕ್ಕದ ಹೊಲಕ್ಕೆ ಕರೆದು ಕೊಂಡು ಹೋಗಿ ಅತ್ಯಾಚಾರ ಎಸಗಿದ ಆಘಾತಕಾರಿ ಘಟನೆ ಬಿಹಾರದಲ್ಲಿ ನಡೆದಿದೆ.

ಈ ಘಟನೆ ಶುಕ್ರವಾರ ಬೆಳಗ್ಗೆ ಭೋಜ್ ಪುರ್ ಜಿಲ್ಲೆಯಲ್ಲಿ ನಡೆದಿದ್ದು,11 ವರ್ಷದ ಬಾಲಕಿಯನ್ನು ಶಾಲೆಯ ಹಿರಿಯ ವಿದ್ಯಾರ್ಥಿಯೇ ಅತ್ಯಾಚಾರ ಎಸಗಿದ್ದಾನೆ.

ಅತ್ಯಾಚಾರ ಎಸಗಿದ ಪರಿಣಾಮವಾಗಿ ಹುಡುಗಿತ ಬಟ್ಟೆ ರಕ್ತಸಿಕ್ತವಾಗಿದ್ದು, ಸ್ವತಃ ತಂದೆಯೇ ಎತ್ತಿಕೊಂಡು ಆಸ್ಪತ್ರೆಗೆ ಕರೆದೊಯ್ದ ದಾರುಣ ಘಟನೆ ನಡೆದಿದೆ.

ಬಾಲಕಿಯನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿದೆ ಎಂದು ಅರಾ ಪೊಲೀಸ್ ಠಾಣೆಯ ಮಹಿಳಾ ಪೊಲೀಸ್ ಅಧಿಕಾರಿ ಪೂನಮ್ ಹೇಳಿದ್ದಾರೆ.

ಪೊಲೀಸರು ಬಾಲಕಿಯ ಹೇಳಿಕೆಯನ್ನು ಪಡೆದಿದ್ದಾರೆ. ಶಾಲೆಯ ಹಿರಿಯ ವಿದ್ಯಾರ್ಥಿ ಅಪು ಸಾಹ್ ಈ ಕೃತ್ಯವೆಸಗಿದ್ದು, ಬಳಿಕ ಬಾಲಕಿ ಶಾಲೆಯ ಶಿಕ್ಷಕರಿಗೆ ಮಾಹಿತಿ ನೀಡಿದ್ದಾಳೆ.

Leave a Reply