ಮಂಗಳೂರು: ಮಂಗಳೂರಿನಲ್ಲಿ ಇತ್ತೀಚೆಗೆ ಎರಡು ಸಮುದಾಯದ ಅಮಾಯಕರ ಕೊಲೆ ನಡೆದ ಘಟನೆಯ ಬಿಸಿ ತಣ್ಣಗಾಗುವ ಮೊದಲೇ ಇನ್ನೊಂದು ಘಟನೆ ಸಂಭವಿಸಿದೆ. ಇಲ್ಲಿನ ಜಿಲ್ಲಾ ಕಾರಾಗೃಹದಲ್ಲಿ ಕೈದಿಗಳ ಎರಡು ಗುಂಪಿನ ನಡುವೆ ಮಾರಾಮಾರಿ‌ ನಡೆದಿದ್ದು, ಗಲಾಟೆ ನಿಯಂತ್ರಿಸಲು ಮುಂದಾದ ಪೊಲೀಸರ ಮೇಲೆ ಹಲ್ಲೆ ನಡೆಸಿದ್ದಾರೆ. ಘಟನೆಯಲ್ಲಿ ಇಬ್ಬರು ಪೊಲೀಸರಿಗೆ ಗಾಯಗಳಾಗಿದೆ. ಒಬ್ಬರ ಕೈ ಮೂಳೆ ಮುರಿದಿದೆ ಎಂಬ ಮಾಹಿತಿ ಲಭ್ಯವಾಗಿದೆ. ಮಾರಾಮಾರಿಯಲ್ಲಿ ಕೈದಿಗಳಿಗೂ ಗಾಯಗಳಾಗಿದೆ ಎನ್ನಲಾಗಿದೆ. ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ಲಾಠಿ ಪ್ರಹಾರ ನಡೆಸಿದ್ದಾರೆ.

Leave a Reply