ಸರ್ಕಾರಿ ಶಾಲೆಗಳಿಗೆ ಏನೆಲ್ಲಾ ಸೌಲಭ್ಯ ನೀಡಿದರೂ ಮಕ್ಕಳ ಸಂಖ್ಯೆ ದಿನಾ ಕುಸಿಯುತ್ತಾ ಇದೆ. ಇದು ಕರ್ನಾಟಕಕ್ಕೆ ಸೀಮಿತವಾಗಿಲ್ಲ.

2010 -2011 ರಿಂದ 2014- 15ನೇ ಸಾಲಿನವರೆಗೆ ಸರ್ಕಾರಿ ಶಾಲೆಗಳಲ್ಲಿನ ಪ್ರವೇಶಾತಿ ಪ್ರಮಾಣ ದೇಶಾದ್ಯಂತ ಶೇ.15ರಷ್ಟು ಕುಸಿತ ಕಂಡಿದ್ದರೆ, ಖಾಸಗಿ ಶಾಲೆಗಳ ಪ್ರವೇಶಾತಿ ಪ್ರಮಾಣದಲ್ಲಿ ಶೇ.33ರಷ್ಟು ಏರಿಕೆಯಾಗಿದೆ. ಯಾಕೆಂದರೆ ಮಕ್ಕಳು ಹೆತ್ತವರು ಆಂಗ್ಲ ಮಾಧ್ಯಮ ಶಾಲೆಗಳಿಗೆ ಆಕರ್ಷಿತರಾಗುತ್ತಿದ್ದಾರೆ. ಬಿಸಿಯೂಟದ ಹೊರತಾಗಿಯೂ ಮಕ್ಕಳು ಶಾಲೆಗೆ ಆಕರ್ಷಿತರಾಗುತ್ತಿಲ್ಲ ಎಂದು ಸಂಸತ್ತಿನ ಸ್ಥಾಯಿ ಸಮಿತಿ ಚರ್ಚಿಸಿದೆ.

ಖಾಸಗಿ ಸಂಸ್ಥೆಗಳ ಸಂಖ್ಯೆ ಹೆಚ್ಚಾಗುತ್ತಿರುವುದರಿಂದ ಸರ್ಕಾರಿ ಶಾಲೆಗಳ ಪ್ರವೇಶಾತಿಯಲ್ಲಿ ಕುಸಿತ ಕಂಡುಬಂದಿದೆ. ಅದನ್ನು ತಡೆಯುವ ಉದ್ದೇಶದಿಂದ ಈಗಾಗಲೇ ಕೆಲವು ರಾಜ್ಯ ಸರ್ಕಾರಗಳು ಇಂಗ್ಲಿಷ್ ಮಾಧ್ಯಮ ಶಾಲೆ ತೆರೆಯಲು ಮುಂದಾಗಿವೆಂದು ಮಾನವ ಸಂಪನ್ಮೂಲ ಸಚಿವಾಲಯ ಸ್ಥಾಯಿ ಸಮಿತಿಗೆ ತಿಳಿಸಿದೆ.

Leave a Reply