ಹೊಸಪೇಟೆ: ಬಾವುಟ ಕಟ್ಟುವ ವಿಷಯಕ್ಕೆ ಹಿಂದೂ– ಮುಸ್ಲಿಂ ನಡುವೆ ವಿವಾದವುಂಟಾಗಿದ್ದು, ಸ್ಥಳದಲ್ಲಿ ಬಿಗುವಿನ ವಾತಾವರಣ ಇದೆ.

ಹೊಸಪೇಟೆ ತಾಲ್ಲೂಕಿನ ಕಮಲಾಪುರದಲ್ಲಿ ಸೋಮವಾರ ಎರಡು ಕೋಮಿನವರ ವಿರುದ್ಧ ಈ ಕ್ಷುಲ್ಲಕ ವಿಷಯಕ್ಕೆ ಸಂಬಂಧಿಸಿ ಗಲಾಟೆ ಉಂಟಾಗಿದೆ.

ಛತ್ರಪತಿ ಶಿವಾಜಿ ಮಹಾರಾಜರ ಜಯಂತಿ ಪ್ರಯುಕ್ತ ಹಿಂದೂ ಜಾಗರಣ ವೇದಿಕೆಯ ಕಾರ್ಯಕರ್ತನೊಬ್ಬ ಧ್ವಜ ಕಟ್ಟಲು ಹೋಗಿದ್ದು, ಈ ಸಂದರ್ಭದಲ್ಲಿ ಆತನನ್ನು ಥಳಿಸಲಾಗಿದೆ ಎನ್ನಲಾಗಿದೆ. . ಇದರಿಂದ ಕೋಪಗೊಂಡ ಹಿಂದೂ ಕಾರ್ಯಕರ್ತರು ಮಸೀದಿ ಮೇಲೆ ಕಲ್ಲು ತೂರಾಟ ನಡೆಸಿದ್ದು ಪರಿಣಾಮವಾಗಿ ಮಸೀದಿಯ ಗಾಜು ಪುಡಿಯಾಗಿದೆ. ಇದರಿಂದ ಪರಿಸ್ಥಿತಿ ಇನ್ನಷ್ಟು ಹದಗೆಟ್ಟು, ಪರಸ್ಪರ ಗಲಾಟೆ ನಡೆದಿದೆ ಎಂದು ಪೊಲೀಸರು ಹೇಳಿದ್ದಾರೆ.. ಮಸೀದಿಗೆ ಕಲ್ಲು ಎಸೆದವರನ್ನು ತಕ್ಷಣ ಬಂಧಿಸಬೇಕೆಂದು ಮುಸ್ಲಿಮರು ಪ್ರತಿಭಟನೆ ಮಾಡಿದ್ದಾರೆ. ಹೊಸಪೇಟೆ- ಕಂಪ್ಲಿ ಮುಖ್ಯರಸ್ತೆಯಲ್ಲಿ ರಸ್ತೆತಡೆ ಚಳವಳಿ ನಡೆಸುತ್ತಿದ್ದು, ಯಾವುದೇ ಕಾರಣಕ್ಕೂ ಯುವಕರು ಹಿಂದೆ ಸರಿಯುತ್ತಿಲ್ಲ ಎಂದು ವರದಿಯಾಗಿದೆ.

ಸ್ಥಳಕ್ಕೆ ಉಪವಿಭಾಗಾಧಿಕಾರಿ ಗಾರ್ಗಿ ಜೈನ್ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದು ಹೆಚ್ಚುವರಿ ಪೊಲೀಸರನ್ನು ನೇಮಿಸಲಾಗಿದೆ.

ರಸ್ತೆ ತಡೆ ನಿಲ್ಲಿಸಬೇಕೆಂದು ಉಪವಿಭಾಗಾಧಿಕಾರಿ ಗಾರ್ಗಿ ಜೈನ್ ಮನವಿ ಮಾಡಿದ್ದಾರೆ. ಆದರೆ ಯಾವುದೇ ಸಕಾರಾತ್ಮಕ ಪ್ರತಿಕ್ರಿಯೆ ನೀಡಿಲ್ಲ. ಇದರಿಂದಾಗಿ ಹಂಪಿ, ಶಿವಮೊಗ್ಗ, ರಾಯಚೂರು ಕಡೆಗೆ ಹೋಗುವ ವಾಹನಗಳ ಸಂಚಾರಕ್ಕೆ ಅಡ್ಡಿಯಾಗಿದೆ. ಪ್ರಯಾಣಿಕರು ಪರದಾಡುವಂತಾಗಿದೆ.

Leave a Reply