ಶಿವಮೊಗ್ಗ: ‘ಸರಕಾರಿ ವೆಚ್ಚದಲ್ಲಿ ಸಾಧನಾ ಸಮಾವೇಶ ಮಾಡಿ, ಸಿಎಂ ಸಿದ್ದರಾಮಯ್ಯ ನೈತಿಕತೆ ಮರೆಯುತ್ತಿದ್ದಾರೆ. ಸರಕಾರಿ ದುಡ್ಡಿನಲ್ಲಿ ಸಾಧನಾ ಸಮಾವೇಶ ಮಾಡದಿರಿ.
ಮಂಗನ ಕೈಲಿ ಮಾಣಿಕ್ಯ ಕೊಟ್ಟಂತೆ ಇವರಿಗೆ ಅಧಿಕಾರ ಕೊಟ್ಟಂತಾಗಿದೆ‌. ಹುಚ್ಚನ ಕೈಲಿ ಅಧಿಕಾರ ಕೊಟ್ಟಿದ್ದೀವಿ ಎಂದು ಪ್ರತಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪ ಸಿಎಂ ಸಿದ್ದರಾಮಯ್ಯ ಅವರ ವಿರುದ್ಧ ಕಿಡಿಕಾರಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡುತ್ತಾ ಅವರು, ಸರ್ಕಾರದ ಸಾಧನೆಗಳನ್ನು ಹೇಳುವುದನ್ನು ಬಿಟ್ಟು ಪ್ರತಿಪಕ್ಷಗಳನ್ನು ಟೀಕಿಸಲು ಸಾರ್ವಜನಿಕರ ಹಣ ಬಳಸುತ್ತಿದ್ದಾರೆ. ಒಬ್ಬ ಮುಖ್ಯಮಂತ್ರಿ ತನ್ನ ನೈತಿಕತೆ ತೋರಿಸಬೇಕು. ಕಾಂಗ್ರೆಸ್ ಸಮಾವೇಶ ಮಾಡಲಿ. ಸರ್ಕಾರಿ ವೆಚ್ಚದಲ್ಲಿ ಮಾಡುವುದು ಬೇಡ ಎಂದು ಆಗ್ರಹಿಸಿದರು.

Leave a Reply