ನವದೆಹಲಿ: ಭ್ರಷ್ಟಾಚಾರ ಪ್ರಕರಣದಲ್ಲಿ ಜಾಮೀನು ಮೂಲಕ ಹೊರ ಬಂದಿರುವ ಗಣಿ ದೊರೆ ಜನಾರ್ಧನ ರೆಡ್ಡಿ ಚುನಾವಣಾ ಪ್ರಚಾರ ನಡೆಸಲಾಗದು ಎಂದು ಸುಪ್ರೀಮ್ ಕೋರ್ಟು ತಿಳಿಸಿದೆ.

2015ರಲ್ಲಿ ಜನಾರ್ಧನ ರೆಡ್ಡಿಗೆ ದೊರೆತ ಜಾಮೀನು ಅನುಸಾರ ಬಳ್ಳಾರಿಗೆ ಪ್ರವೇಶಿಸುವುದಕ್ಕೆ ನಿರ್ಬಂಧವಿದೆ. ಆದ್ದರಿಂದ ಚುನಾವಣಾ ಪ್ರಚಾರ ನಡೆಸಲಾಗದು ಎಂದು ಸುಪ್ರೀಮ್ ಕೋರ್ಟು ಸ್ಪಷ್ಟಪಡಿಸಿದೆ.

ಬಳ್ಳಾರಿಯಲ್ಲಿ ಸ್ಪರ್ಧಿಸುತ್ತಿರುವ ತನ್ನ ಸಹೋದರ ಸೋಮಶೇಖರ ರೆಡ್ಡಿ ಪರವಾಗಿ ಪ್ರಚಾರ ನಡೆಸಲು ಜಾಮೀನು ವ್ಯವಸ್ಥೆಯಲ್ಲಿ ಹತ್ತು ದಿನಗಳ ಕಾಲಾವಕಾಶ ಕೋರಿ ಸಲ್ಲಿಸಿದ ಅರ್ಜಿಯನ್ನು ತಳ್ಳಿ ಹಾಕಿದ ನ್ಯಾಯಾಲಯ ಈ ತೀರ್ಪು ನೀಡಿದೆ. ಸೋಮಶೇಖರ ರೆಡ್ಡಿ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ. ಈಗಾಗಲೇ ಸಿದ್ದರಾಮಯ್ಯ ವಿರುದ್ಧ ಸ್ಪರ್ಧಿಸುತ್ತಿರುವ ಮಿತ್ರ ರಾಮುಲು ಪರ ಪ್ರಚಾರದಲ್ಲಿ ಜನಾರ್ಧನ ರೆಡ್ಡಿ ತೊಡಗಿಸಿಕೊಂಡಿದ್ದನ್ನು ಇಲ್ಲಿ ಸ್ಮರಿಸಬಹುದು.

Leave a Reply