ಇಂದು ಮಂಗಳೂರಿನ ಕಾಟಿಪಳ್ಳದಲ್ಲಿ ಯುವಕನನ್ನು ಕೊಲೆ ಮಾಡಲಾಗಿದೆ. 32 ವರ್ಷದ ದೀಪು ಕೊಲೆಗೀಡಾದ ದುರ್ದೈವಿ.

ಮೊಬೈಲ್ ಸಿಮ್ ಕಾರ್ಡುಗಳ ವಿತರಣಾ ಕಂಪೆನಿಯಲ್ಲಿ ಕಾರ್ಯನಿರ್ವಾಹಕರಾಗಿ ದೀಪು ಕೆಲಸ ಮಾಡುತ್ತಿದ್ದರು.

ವಿವರಗಳ ಪ್ರಕಾರ, ದೀಪು ಬೈಕ್ ಮೇಲೆ ಹೋಗುತ್ತಿದ್ದಾಗ ಕಾರಿನಲ್ಲಿ ಬಂದ ನಾಲ್ಕು ಮಂದಿ ಅವನನ್ನು ತಡೆದು ಮಾರಕಾಸ್ತ್ರಗಳಿಂದ ಹೊಡೆದು ಕೊಲೆ ಮಾಡಿದ್ದಾರೆ. ಕೊಲೆಗಾರರ ಗುರುತು ಇನ್ನೂ ಸಿಕ್ಕಿಲ್ಲ. ಪೊಲೀಸರು ಕೂಡಲೇ ಘಟನೆಯ ಸ್ಥಳಕ್ಕೆ ಆಗಮಿಸಿದ್ದು, ತನಿಖೆ ಮುಂದುವರಿದಿದೆ.

Leave a Reply