ಬೆಂಗಳೂರು: ಹಮ್ ಸಫರ್ ರೈಲು ಮತ್ತು ಹಲವು ಯೋಜನೆಗಳಿಗೆ ಚಾಲನೆ ನೀಡಲು ಪ್ರಧಾನಿ ನರೇಂದ್ರ ಮೋದಿ ಮೈಸೂರಿಗೆ ಆಗಮಿಸಿದ್ದು ಸಿಎಂ ಸಿದ್ದರಾಮಯ್ಯ ಅವರನ್ನು ಹೂಗುಚ್ಛ ನೀಡಿ ಸ್ವಾಗತಿಸಿದ್ದಾರೆ.

ಭಾನುವಾರ ತಡರಾತ್ರಿ 11 ಗಂಟೆಗೆ ಮೋದಿ ಮೈಸೂರು ಮಂಡಕಳ್ಳಿ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದು, ಮೋದಿಯವರು ವಿಮಾನದಿಂದ ಇಳಿಯುತ್ತಿದ್ದಂತೆ ಜನ ಘೋಷಣೆ ಕೂಗಿದರು.

Image result for humsafar railway project

ಮೋದಿ ವೇಳಾಪಟ್ಟಿ:

ಬೆಳಗ್ಗೆ 8.30ಕ್ಕೆ ವಿಡಿಯೋ ಕಾನ್ಫರೆನ್ಸ್ ಮೂಲಕ ಮಾತುಕತೆ

ಬೆಳಗ್ಗೆ 10.30ಕ್ಕೆ ಲಲಿತ್ ಮಹಲ್ ಹೆಲಿಪ್ಯಾಡ್‍ನಿಂದ ಶ್ರವಣಬೆಳಗೊಳಕ್ಕೆ ಪ್ರಯಾಣ

ಬೆಳಗ್ಗೆ 10.30ರಿಂದ ಶ್ರವಣಬೆಳಗೊಳ ಮಹಾಮಸ್ತಕಾಭಿಷೇಕದಲ್ಲಿ ಭಾಗಿ

ಮಧ್ಯಾಹ್ನ 2.45ಕ್ಕೆ ಹೆಲಿಕಾಪ್ಟರ್ ಮೂಲಕ ಮೈಸೂರಿನ ಮಹಾರಾಜ ಹೆಲಿಪ್ಯಾಡ್‍ಗೆ ಆಗಮನ

ಮಧ್ಯಾಹ್ನ 3 ಗಂಟೆಗೆ ರಸ್ತೆ ಮಾರ್ಗವಾಗಿ ಮೈಸೂರಿನ ರೈಲ್ವೆ ನಿಲ್ದಾಣಕ್ಕೆ ಆಗಮನ

ರೈಲು ನಿಲ್ದಾಣದಿಂದಲೇ ವಿವಿಧ ಕಾರ್ಯಕ್ರಮಗಳಿಗೆ ಚಾಲನೆ

3.45ಕ್ಕೆ ಮಹಾರಾಜ ಮೈದಾನಕ್ಕೆ ರಸ್ತೆ ಮಾರ್ಗವಾಗಿ ಆಗಮನ

4 ಗಂಟೆಗೆ ಮಹಾರಾಜ ಕಾಲೇಜಿನಲ್ಲಿ ಬೃಹತ್ ಸಮಾವೇಶದಲ್ಲಿ ಭಾಗಿ

5 ಗಂಟೆಗೆ ಮೈಸೂರು ಮಂಡಕಳ್ಳಿ ವಿಮಾನ ನಿಲ್ದಾಣಕ್ಕೆ ಆಗಮನ

ಮಂಡಕಳ್ಳಿ ವಿಮಾನ ನಿಲ್ದಾಣದಿಂದ ದೆಹಲಿಗೆ ನಿರ್ಗಮನ

Leave a Reply