ನವದೆಹಲಿ: ಆರ್ ಎಸ್ ಎಸ್ ನಿಂದ ಕಾರ್ಯಕ್ರಮಕ್ಕೆ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರಿಗೆ ಅಹ್ವಾನ ನೀಡಲಾಗಿದೆ ಎಂಬ ವಿಚಾರ ಸುಳ್ಳಾಗಿದ್ದು, ಈ ವರೆಗೂ ತಮಗೆ ಯಾವುದೇ ರೀತಿಯ ಆಹ್ವಾನ ಬಂದಿಲ್ಲ ಎಂದು ಕಾಂಗ್ರೆಸ್ ಸ್ಪಷ್ಟನೆ ನೀಡಿದೆ.

ಇಂತಹ ಊಹಾಪೋಹಗಳ ಪ್ರಶ್ನೆಗಳಿಗೆ ನಾನು ಯಾವುದೇ ರೀತಿಯ ಪ್ರತಿಕ್ರಿಯೆ ನೀಡುವುದಿಲ್ಲ. ಪ್ರಸ್ತುತ ಕೇವಲ ಊಹೆ ಎಂಬುದು ನನ್ನ ಭಾವನೆ. ಆದರೆ ನಮಗೆ ಅಧಿಕೃತ ಆಹ್ವಾನ ಸಿಕ್ಕಾಗ ಮಾತ್ರ ಈ ಬಗ್ಗೆ ಪ್ರತಿಕ್ರಿಯೆ ನೀಡುತ್ತೇವೆ. ಆಹ್ವಾನ ದೊರೆತ ಬಳಿಕ ಅದರ ಸ್ವೀಕಾರ ಅಥವಾ ತಿರಸ್ಕಾರದ ಬಗ್ಗೆ ನಿರ್ಧರಿಸುತ್ತೇವೆ. ಸದ್ಯಕ್ಕೆ ಅಂತಹ ಯಾವುದೇ ಆಹ್ವಾನ ಬಂದಿಲ್ಲ ಎಂದು ಕಾಂಗ್ರೆಸ್ ವಕ್ತಾರ ಅಭಿಷೇಕ್ ಮನು ಸಿಂಘ್ವಿ ಅವರು ಸುದ್ದಿಗಾರನ್ನುದ್ದೇಶಿಸಿ ಮಾತನಾಡುತ್ತಾ ಹೇಳಿದ್ದಾರೆ.

ಮೂಲಗಳ ಪ್ರಕಾರ ಆರೆಸ್ಸೆಸ್ ತನ್ನ ಲೆಕ್ಚರ್ ಸೀರೀಸ್ ಕಾರ್ಯಕ್ರಮಕ್ಕೆ ರಾಹುಲ್ ಗಾಂಧಿಯವರನ್ನು ಕರೆಯುತ್ತದೆ ಎಂಬ ಮಾತು ಕೇಳಿ ಬಂದಿತ್ತು. ಮಾತ್ರವಲ್ಲ ವಿವಿಧ ವಿಚಾರಧಾರೆಯ ಜನರನ್ನು ಆರೆಸ್ಸೆಸ್ ಕಾರ್ಯಕ್ರಮಕ್ಕೆ ಕರೆಯುವ ಪಟ್ಟಿಯಲ್ಲಿ ಸೀತಾರಾಮ್ ಯೆಚೂರಿಯ ಹೆಸರೂ ಕೇಳಿ ಬಂದಿತ್ತು.

Leave a Reply