ನವದೆಹಲಿ : ಕಿತ್ತಳೆ ಬಣ್ಣದ ಪ್ರತ್ಯೇಕ ಪಾಸ್‌ಪೋರ್ಟ್‌ ವಿತರಿಸುವ ಯೋಚನೆಯನ್ನು ಕೇಂದ್ರ ಸರ್ಕಾರ ಕೈಬಿಟ್ಟಿದೆ. ಇದರಿಂದ ಪಾಸ್ಪೋರ್ಟ್ ತಾರತಮ್ಯ ಎಂಬ ಆರೋಪಕ್ಕೆ ತೆರೆ ಬೀಳಲಿದೆ. ಮಾತ್ರವಲ್ಲ, ಪಾಸ್‌ಪೋರ್ಟ್‌ನ ಕೊನೆಯ ಪುಟದಲ್ಲಿ ವಿಳಾಸ ಹಾಗೂ ಇನ್ನಿತರ ಮಾಹಿತಿ ಮುದ್ರಿಸದಿರುವ ನಿರ್ಧಾರದಿಂದಲೂ ಹಿಂದೆ ಸರಿದಿದ್ದು, ಅದು ಹಿಂದಿನಂತೆಯೇ ಮುಂದುವರಿಯಲಿರುವುದು ಎಂದು ವಿದೇಶಾಂಗ ಸಚಿವಾಲಯ ಹೇಳಿದೆ.

ಇದೀಗ ಮೊದಲಿನಂತೆಯೇ ಕೊನೆಯ ಪುಟದಲ್ಲಿ ವಿಳಾಸ ಹಾಗೂ ಇನ್ನಿತರ ಮಾಹಿತಿ ಮುದ್ರಿಸುವ ಪದ್ಧತಿ ಮುಂದುವರಿಸುವುದಾಗಿ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ವಿದೇಶಗಳಲ್ಲಿ ಭಾರತೀಯ ಕಾರ್ಮಿಕರ ಶೋಷಣೆ ತಪ್ಪಿಸಲು 10ನೇ ತರಗತಿ ಉತ್ತೀರ್ಣರಾಗದವರಿಗೆ ಕಿತ್ತಳೆ ಬಣ್ಣದ ಪಾಸ್‌ಪೋರ್ಟ್ ನೀಡಲು ಕೇಂದ್ರ ಚಿಂತನೆ ನಡೆಸಿತ್ತು. ಆದರೆ ಇದರ ಬಗ್ಗೆ ಅಪಸ್ವರ ಕೇಳಿ ಬಂದಿತ್ತು. ಇದು ಬಡವರು ಮತ್ತು ಅನಕ್ಷರಸ್ಥ ಕಾರ್ಮಿಕರ ತಾರತಮ್ಯಕ್ಕೆ ದಾರಿ ಮಾಡಿಕೊಡಲಿದೆ ಎಂದು ಆತಂಕ ವ್ಯಕ್ತಪಡಿಸಿದ್ದರು.

“ಎಮ್ಎಎ ಅಧಿಕಾರಿಗಳು ಮತ್ತು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವಾಲಯಗಳನ್ನು ಒಳಗೊಂಡ ಮೂರು ಸದಸ್ಯರ ಸಮಿತಿಯ ಶಿಫಾರಸಿನ ಮೇರೆಗೆ ವಿದೇಶಾಂಗ ಸಚಿವಾಲಯವು (ಎಂಎಎ) ಈ ನಿರ್ಧಾರ ತೆಗೆದುಕೊಂಡಿದೆ” ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ಹೇಳಿಕೆಯಲ್ಲಿ ತಿಳಿಸಿದೆ.

Leave a Reply