ನವದೆಹಲಿ: ಭಾರತದೊಂದಿಗಿನ ಬಾಂಧವ್ಯ ಸುಧಾರಣೆಗೆ ಪಾಕಿಸ್ತಾನ ಸರ್ಕಾರ ಉತ್ಸುಕವಾಗಿದ್ದು ನರೇಂದ್ರ ಮೋದಿ ನೇತೃತ್ವದ ಹೊಸ ಸರ್ಕಾರದ ಜೊತೆ ಕೈಜೋಡಿಸಲು ಮುಂದೆ ಬಂದಿದೆ. ಪಾಕ್‌ ಪ್ರಧಾನಿಇಮ್ರಾನ್ ಖಾನ್ ಮೋದಿಯವರಿಗೆ ದೂರವಾಣಿ ಮೂಲಕ ಶುಭಾಶಯ ಕೋರಿದ್ದಾರೆ.
ಲೋಕಸಭೆ ಚುನಾವಣಾ ಫಲಿತಾಂಶ ಪ್ರಕಟವಾದ ದಿನವೇ ಇಮ್ರಾನ್ ಖಾನ್ ತಮ್ಮ ಟ್ವಿಟ್ಟರ್ ಸಂದೇಶದಲ್ಲಿ ಬಿಜೆಪಿ ಮೈತ್ರಿಕೂಟದ ವಿಜಯಕ್ಕಾಗಿ ಮೋದಿಯವರನ್ನು ಅಭಿನಂದಿಸಿದ್ದರು. ದಕ್ಷಿಣ ಏಷ್ಯಾದ ಶಾಂತಿ, ಪ್ರಗತಿ ಮತ್ತು ಸಮೃದ್ಧಿಗಾಗಿ ಒಟ್ಟಾಗಿ ಶ್ರಮಿಸುವ ಅಭಿಲಾಷೆಯನ್ನು ವ್ಯಕ್ತಪಡಿಸುವ ಜೊತೆಗೆ ದ್ವಿಪಕ್ಷೀಯ ಮಾತುಕತೆ ಪುನರಾರಂಭಿಸುವ ಪ್ರಸ್ತಾಪವನ್ನು ಅವರು ಮುಂದಿಟ್ಟಿದ್ದಾರೆ.

Leave a Reply