ಜೈಪುರ: ರಾಜಸ್ಥಾನದಲ್ಲಿ ಬಿಜೆಪಿಯ ಮೂವರು ನಾಯಕರ ನಿಧನದ ಮೂರು ಕ್ಷೇತ್ರಗಳಿಗೆ ಚುನಾವಣೆಯಲ್ಲಿ ಎರಡು ಲೋಕಸಭಾ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಭರ್ಜರಿ ಜಯ ಗಳಿಸಿದೆ.

ಮಂಡಲ್ ಗರ್ ವಿಧಾನಸಭಾ ಕ್ಷೇತ್ರವನ್ನು ಗೆದ್ದಿರುವ ಕಾಂಗ್ರೆಸ್ ಅಜ್ಮೀರ್ ಹಾಗು ಆಲ್ವಾರ್ ನಲ್ಲೂ ಗೆಲುವನ್ನು ಹೊಂದಿದೆ.

ಆಲ್ವಾರ್ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ನ ಕರಣ್ ಸಿಂಗ್ ಯಾದವ್ 1.97 ಲಕ್ಷ ಮತಗಳ ಅಂತರದಲ್ಲಿ ಜಯಿಸಿದ್ದಾರೆ.

“ನಿಮ್ಮ ಬಗ್ಗೆ ನನಗೆ ಹೆಮ್ಮೆ ಇದೆ. ರಾಜಸ್ಥಾನದ ಜನರು ಬಿಜೆಪಿಯನ್ನು ತಿರಸ್ಕರಿಸಿದ್ದಾರೆ ಎಂಬುದಕ್ಕೆ ಇದು ನಿದರ್ಶನ” ಎಂದು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಟ್ವೀಟ್ ಮಾಡಿದ್ದಾರೆ.

Leave a Reply