ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಸಮೀಪದ ಸುರತ್ಕಲ್ ನ ಕಾಟಿಪಳ್ಳದಲ್ಲಿ ದೀಪಕ್ ರಾವ್ ಹತ್ಯೆಯ ದಿನದಂದೇ ದುಷ್ಕರ್ಮಿಗಳ ದಾಳಿಗೆ ತುತ್ತಾಗಿ ಚಿಂತಾಜನಕ ಸ್ಥಿತಿಯಲ್ಲಿರುವ ಬಶೀರ್‍ರನ್ನು ನೋಡಲು ಸಚಿವ ಯುಟಿ ಖಾದರ್ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಭೇಟಿ ನೀಡಿದ್ದು, ಕುಟುಂಬದವರಿಗೆ ಸಾಂತ್ವನ ಹೇಳಿದ್ದಾರೆ. ಮಾತ್ರವಲ್ಲ, ಆಸ್ಪತ್ರೆಯ ವೆಚ್ಚವನ್ನು ಸರಕಾರದಿಂದ ನೀಡುವ ಬಗ್ಗೆ ಭರವಸೆ ನೀಡಿದ್ದಾರೆ.

ಇದೇ ಸಂದರ್ಭದಲ್ಲಿ ಬಶೀರ್ ರವರ ಹತ್ಯೆ ವೀಡಿಯೋ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದ್ದು ದುಷ್ಕರ್ಮಿಗಳನ್ನು ಪೊಲೀಸರು ಬಂಧಿಸಿದ್ದಾರೆ ಎನ್ನಲಾಗಿದೆ. ಸದ್ಯ ಬಶೀರ್ ರವರ ಸ್ಥಿತಿ ಚಿಂತಾಜನಕವಾಗಿದೆ.

Leave a Reply